ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ, ಈಗ ದೆಹಲಿ ಸರ್ಕಾರದ ಮತ್ತೊಬ್ಬ ಸಚಿವರಿಗೂ ಕಂಟಕ ಆಗುವ ಸಾಧ್ಯತೆ ಇದೆ. ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಇ.ಡಿ ಸಮನ್ಸ್ ಜಾರಿ ಮಾಡಿದೆ. ನಜಾಫ್ಗಢದ ಆಮ್ ಆದ್ಮಿ ಪಕ್ಷದ ಶಾಸಕರಾಗಿರುವ ಗಹ್ಲೋಟ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಇಲಾಖೆಗಳನ್ನ ನಿಭಾಯಿಸುತ್ತಿದ್ದಾರೆ.ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಇ.ಡಿ ಗೆಹ್ಲೋಟ್ಗೆ ಇಡಿ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.