ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಗೆ ಇಡಿ ವಿರೋಧ ವ್ಯಕ್ತಪಡಿಸಿದತ್ತು. ಆದರೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಇಡಿಗೆ ತೀಕ್ಷ್ಣ ಪ್ರಶ್ನೆಗಳನ್ನು ಕೇಳಿತ್ತು, ಸಂಜಯ್ ಸಿಂಗ್ ಬಂಧನದಲ್ಲಿರಲು ಕಾರಣವೇನು..? ಇಷ್ಟು ದಿನ ಬಂಧನದಲ್ಲಿದ್ದಿದ್ದು ಹೇಗೆ ಸಹಾಯಕವಾಯಿತು.? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಅಲ್ಲದೆ ಸಂಜಯ್ ಸಿಂಗ್ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಸರಿಯಾದ ಕಾರಣ, ಲಿಖಿತ ಸಮರ್ಥನೆಯೊಂದಿಗೆ ಬರುವಂತೆ ಇಡಿ ವಕೀಲರಿಗೆ ಕೋರ್ಟ್ ಸೂಚನೆ ಕೊಟ್ಟಿದೆ.