ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಅಂತ ಮಾಜಿ ಶಾಸಕ ಡಾ.ಯತೀಂದ್ರ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಡಿದ ಡಾ. ಯತೀಂದ್ರ, ಇಂತವರನ್ನ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಯತೀಂದ್ರ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು? ಇಂತವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ.ಪ್ರಧಾನಿ ಮೋದಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಅದು ಆಗಲಿಲ್ಲ. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡೋದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಎಂದು ಹೇಳುತ್ತಿದ್ದಾರೆ. ಕಪ್ಪು ಹಣ ವಾಪಸ್ ತರುತ್ತೇವೆ ಎಂದಿದ್ದರು, ತಂದರೇ? ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿದರು. 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ, 400ಕ್ಕೂ ಹೆಚ್ಚು ಸ್ಥಾನ ಬಂದರೆ ಸಂವಿಧಾನ ಬದಲಾವಣೆ ಮಾಡುವುದು ಇವರ ಹಿಡನ್ ಅಜೆಂಡಾ ಅಂತ ಯತೀಂದ್ರ ತೀವ್ರ ವಾಗ್ದಾಳಿ ನಡೆಸಿದರು.