ಲೋಕಸಭಾ ಚುನಾವಣಾ ಸಮರದಲ್ಲಿ, ನಾಯಕರ ವಾಕ್ಸಮರವು ತಾರಕಕ್ಕೇರಿದೆ. ಪ್ರಚಾರದ ಅಖಾಡದಲ್ಲಿ ವಿಪಕ್ಷಗಳ ವಿರುದ್ಧ ಮುಗಿಬಿದ್ದಿರುವ ಪ್ರಧಾನಿ ನರೇಂದ್ರ ಮೋದಿ, ಇಂಡಿಯಾ ಒಕ್ಕೂಟದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟರ ವಿರುದ್ಧ ದೊಡ್ಡ ಹೋರಾಟ, ದಾಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರ ಉತ್ತರ ಪ್ರದೇಶದಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದ ಪ್ರಧಾನಿ ಮೋದಿ, ‘ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ನಿಲ್ಲಿಸುವುದಿಲ್ಲ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳುತ್ತೇವೆ. ಮೋದಿ ಭ್ರಷ್ಟಾಚಾರದ ವಿರುದ್ಧ ಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತಿರುವಾಗ, ಇವರು ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿದ್ದಾರೆ. ನನ್ನನ್ನು ಬೆದರಿಸುತ್ತೇನೆ ಎಂದು ಅವರು ಭಾವಿಸುತ್ತಾರೆ. ಆದರೆ ಭಾರತೀಯರನ್ನು ಭ್ರಷ್ಟರಿಂದ ರಕ್ಷಿಸಲು ನಾನು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.