ಬಿಜೆಪಿ ಮೂರನೇ ಬಾರಿಗೆ ಆಯ್ಕೆಯಾದರೆ ಭಾರತಕ್ಕೆ ಬೆಂಕಿ ಹತ್ತಿಕೊಳ್ಳಲಿದೆ ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರಾಖಂಡದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ರಾಹುಲ್ ಗಾಂಧಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ “ಇದು ಪ್ರಜಾಪ್ರಭುತ್ವದ ಭಾಷೆಯೇ?” ಅಂತ ಪ್ರಶ್ನಿಸಿರುವ ಮೋದಿ, “ದೇಶವು ಮೂರನೇ ಬಾರಿಗೆ ಬಿಜೆಪಿಯನ್ನು ಆರಿಸಿದರೆ ದೇಶಕ್ಕೆ ಬೆಂಕಿ ಹಚ್ಚಲಾಗುವುದು ಎಂದು ಕಾಂಗ್ರೆಸ್ ಶಾಹಿ ಕುಟುಂಬದ ಶಹಜಾದಾ ಕರೆ ಕೊಟ್ಟಿದ್ದಾರೆ. 70 ವರ್ಷಗಳ ಕಾಲ ಆಡಳಿತ ನಡೆಸಿದ ನಂತರ 10 ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದಾರೆ. ದೇಶ ಮತ್ತು ದೇಶಕ್ಕೆ ಬೆಂಕಿ ಹಚ್ಚುವ ಮಾತನಾಡುತ್ತಿದ್ದಾರೆ. ಇದನ್ನು ನೀವು ಒಪ್ಪುತ್ತೀರಾ?. ದೇಶಕ್ಕೆ ಬೆಂಕಿ ಹಚ್ಚಲು ಬಿಡುತ್ತೀರಾ? ಈ ಭಾಷೆ ಸ್ವೀಕಾರ ಮಾಡ್ತೀರಾ.? ಇದು ಪ್ರಜಾಪ್ರಭುತ್ವದ ಭಾಷೆಯೇ? ಇಂತಹ ಮಾತುಗಳನ್ನಾಡಿದವರನ್ನು ಶಿಕ್ಷಿಸುವುದಿಲ್ಲವೇ? ಎಂದು ಮೋದಿ ಜನರನ್ನ ಉದ್ದೇಶಿಸಿ ಕೇಳಿದ್ದಾರೆ.