ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸೇರ್ಪಡೆ ಆಗಿದ್ದಾರೆ. ದೆಹಲಿಯಲ್ಲಿರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರಿದ್ದಾರೆ. 2019ರಲ್ಲಿ ಕಾಂಗ್ರೆಸ್ ನಿಂದ ದೆಹಲಿ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ವಿಜೇಂದರ್ ಸಿಂಗ್, ಬಿಜೆಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದರು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಬಹಳ ಆತ್ಮೀಯರಾಗಿದ್ದರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ವಿಜೇಂದರ್, ಅಭಿವೃದ್ಧಿ ಮತ್ತು ವಿಕಸಿತ ಭಾರತ ನಿರ್ಮಾಣಕ್ಕಾಗಿ ದೇಶಕ್ಕೆ ಬಿಜೆಪಿ ಅಗತ್ಯವಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಪಥದಲ್ಲಿ ಸಾಗುತ್ತಿದೆ. ಹೀಗಾಗಿ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ ಅಂತ ಹೇಳಿದ್ದಾರೆ.