ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈಗ ಅದರ ಭಾಗವಾಗಿ ಈಗ ಪ್ರಣಾಳಿಕೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮ್ಯಾನಿಫಾಸ್ಟೋದಲ್ಲಿ ಗ್ಯಾರಂಟಿಗೆ ಆದ್ಯತೆ ನೀಡಿದ್ದು, ಭರಪೂರ ಘೋಷಣೆಗಳನ್ನ ಮಾಡಿದೆ.ಬರೋಬರೀ 25 ಘೋಷಣೆಗಳನ್ನ ಮಾಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ‘ಯುವ ನ್ಯಾಯ’, ‘ನಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಹಿಸ್ಸೇದಾರಿ ನ್ಯಾಯ’ ಎಂಬ 5 ಐದು ಸ್ತಂಭಗಳ ಆಧಾರವಾಗಿಟ್ಟುಕೊಂಡು ಪ್ರಣಾಳಿಕೆಯನ್ನ ರಚಿಸಿದೆ.
ಕಾಂಗ್ರೆಸ್ ಪ್ರಣಾಳಿಕೆ ಪ್ರಮುಖಾಂಶಗಳು
ದೇಶಾದ್ಯಂತ ಜಾತಿ ಆಧಾರಿತ ಜನಗಣತಿ
ಬಡಮಹಿಳೆಯರಿಗೆ ವಾರ್ಷಿಕ 1 ಲಕ್ಷ ಧನಸಹಾಯ
ದೇಶದ ರೈತರ ಸಾಲ ಮನ್ನಾಗೆ ಕ್ರಮ
30 ಲಕ್ಷ ಸರ್ಕಾರಿ ಉದ್ಯೋಗಗಳ ಸೃಷ್ಟಿ
1 ವರ್ಷದವರೆಗೆ ಅಪ್ರೆಂಟಿಸ್ಶಿಪ್ ಯೋಜನೆಯಡಿ ಯುವಕರಿಗೆ 1 ಲಕ್ಷ
ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಪ್ರತಿ ವರ್ಷ ಎಂಎಸ್ಪಿ
ಕಾರ್ಮಿಕ ನ್ಯಾಯ ಅಡಿಯಲ್ಲಿ, ಕಾರ್ಮಿಕರಿಗೆ ಆರೋಗ್ಯದ ಹಕ್ಕು
ದಿನಕ್ಕೆ ಕನಿಷ್ಠ 400 ರೂ. ವೇತನ ಮತ್ತು ನಗರ ಉದ್ಯೋಗ ಖಾತರಿ
ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ