ಬಹುಭಾಷೆಯ ಖ್ಯಾತ ನಟ ಡೇನಿಯಲ್ ಬಾಲಾಜಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಟನ ದಿಢೀರ್ ಸಾವಿನಿಂದ ಚಿತ್ರರಂಗವೇ ಶೋಕಸಾಗರದಲ್ಲಿ ಮುಳುಗಿದೆ. ಡೇನಿಯಲ್ ಬಾಲಾಜಿ ಅವರಿಗೆ ಶುಕ್ರವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನೈ ಕೊಟ್ಟಿಕಾಕಂನಲ್ಲಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ವಿಲನ್ ಪಾತ್ರಕ್ಕೆ ವಿಶಿಷ್ಟವಾದ ಗುರುತನ್ನು ನೀಡಿದ ನಟರಲ್ಲಿ ಡೇನಿಯಲ್ ಬಾಲಾಜಿ ಒಬ್ಬರು. ಅವರು ಆರಂಭದಲ್ಲಿ ಚಲನಚಿತ್ರೋದ್ಯಮವನ್ನು ನಿರ್ಮಾಣ ವ್ಯವಸ್ಥಾಪಕರಾಗಿ ಪ್ರವೇಶಿಸಿದರು. ಕಮಲ್ ಹಾಸನ್ ನಿರ್ದೇಶನದ ಮರುದನಾಯಕಂ ಚಿತ್ರದಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿಯೂ ಕೆಲಸ ಮಾಡಿದ್ದರು.