ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ-ಪಂಜಾಬ್ ನಡುವಿನ ಪಂದ್ಯದ ವೇಳೆ, ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ, ವಿರಾಟ್ ಕೊಹ್ಲಿಯ ಕಾಲಿಗೆರಗಿದ್ದ. ಇದೀಗ ಈ ಅಭಿಮಾನಿ ಮೇಲೆ ಭದ್ರತಾ ಸಿಬಂದಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕಾಲಿಗೆ ಬಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಜಾಡಿಸಿ, ಕಾಲಿನಿಂದ ಒದಿದ್ದಾರೆ. ಭದ್ರತಾ ಸಿಬ್ಬಂದಿಯ ವರ್ತನೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.