ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ನಡೆದಿರುವ ಹೈಡ್ರಾಮಾವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅಲ್ಲಿನ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಹಲವಾರು ರೀತಿಯ ಬೆಳವಣಿಗೆಗಳು ಆಗಿವೆ. ಆದ್ದರಿಂದ ನಾವು ಇನ್ನು ಅಧಿಕೃತ ಘೋಷಣೆ ಮುಂದೂಡಿದ್ದೇವೆ ಅಷ್ಟೇ. ತಾವು ಯಾರನ್ನೂ ತೆಗೆದುಕೊಳ್ಳೋಕೆ ಪ್ರಯತ್ನ ಮಾಡುತ್ತಿಲ್ಲ. ನಮ್ಮಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ. ಪಕ್ಷದಲ್ಲಿ ಶಿಸ್ತಿನಿಂದ ಇರುವವರ ಹೆಸರನ್ನು ಘೋಷಣೆ ಮಾಡುತ್ತೇವೆ.
ಯಾವುದೇ ಗೊಂದಲವಿಲ್ಲ. ಆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಗಮನ ಇಟ್ಟಿದ್ದೇವೆ ಅಷ್ಟೇ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. ಕಾಂಗ್ರೆಸ್ ನಾಯಕರ ಒಳಜಗಳದಿಂದ ಎನ್ ಡಿಎ ಮೈತ್ರಿಕೂಟಕ್ಕೆ ಲಾಭವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ನಮಗೆ ಗೆಲುವು ನಿಶ್ಚಿತ. ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ ಎಂದರು.