ಲೋಕಸಭೆ ಚುನಾವಣೆಯ ಕಾವು ಏರುತ್ತಿದ್ದಂತೆ, ಮಾತಿನ ಮಲ್ಲಯುದ್ಧವೂ ಜೋರಾಗಿದೆ. ಮಂಡ್ಯ ಅಖಾಡದಲ್ಲಿ ನಿಂತು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದಿದ್ದಾರೆ. ಇದೇ ವರ್ಷ ಡಿಸೆಂಬರ್ ಒಳಗೆ ಕಾಂಗ್ರೆಸ್ ಬಿದ್ದು ಹೋಗಲಿದೆ. ಇದನ್ನ ಹೇಳಲು ನಾನು ಜ್ಯೋತಿಷಿ ಅಲ್ಲ, ಆದರೆ ಕಾಂಗ್ರೆಸ್ ನಾಯಕರೇ ಸರ್ಕಾರವನ್ನ ಬೀಳಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿಯವರ ಈ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಸಂಚಲ ಸೃಷ್ಟಿಸಿದ್ದು, ಕಾಂಗ್ರೆಸ್ ಪಡಸಾಲೆಯಲ್ಲೂ ಇದರ ಬಗ್ಗೆ ಚರ್ಚೆಗಳು ಜೋರಾಗಿಯೇ ನಡೆಯುತ್ತಿದೆ.