ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಕಾರ್ಯತಂತ್ರ ಹೆಣೆಯುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಾ ರಾಮಯ್ಯ ಕಣಕ್ಕಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿರುವ ರಕ್ಷಾರಾಮಯ್ಯ ಗೆಲುವ ಸಿದ್ದುಗೂ ಪ್ರತಿಷ್ಠೆ.
ಚಿಕ್ಕಬಳ್ಳಾಪುರ ಜಿಲ್ಲೆಯು ಐದು ವಿಧಾನಸಭೆ ಕ್ಷೇತ್ರಗಳನ್ನು ಒಳಡಗೊಂಡಿದ್ದು, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಹೀಗಾಗಿ ಚಿಕ್ಕಬಳ್ಳಾಪುರವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಜಿಲ್ಲೆಯ ಕೈ ನಾಯಕರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ದೇವೇಗೌಡರ ಆಪ್ತ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಕಾಂಗ್ರೆಸ್ ಗೆ ಸೆಳೆದಿದ್ದಾರೆ.
ಈಗಾಗಲೇ ಕೆ.ಪಿ. ಬಚ್ಚೇಗೌಡ ಅವರಿಗೆ ಸಚಿವ ಎಂ.ಸಿ.ಸುಧಾಕರ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ, ಶಾಸಕ ಪ್ರದೀಪ್ ಈಶ್ವರ್, ಎಂಎಲ್ಸಿ ಸೀತಾರಾಂ ಕೆ.ಪಿ ಬಚ್ಚೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ, ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.ಕಾಂಗ್ರೆಸ್ ನಾಯಕರ ಆಹ್ವಾನ ಒಪ್ಪಿರುವ ಕೆ.ಪಿ. ಬಚ್ಚೇಗೌಡ, ಶೀಘ್ರವೇ ಕಾಂಗ್ರೆಸ್ ಸೇರಿಲಿದ್ದಾರೆ.