ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರಿನ 20ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಮುಂಜಾನೆಯಿಂದ ದಾಳಿ ನಡೆಸಿದ ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಬಿಲ್ಡರ್ಗಳ ಮನೆ ಮೇಲೆ ದಾಳಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಡಾಕ್ಯುಮೆಂಟ್ಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರಿನ ಕೆಆರ್ ಪುರ, ಕೊಡಿಗೇಹಳ್ಳಿ ಸೇರಿ ಹಲವೆಡೆ ದಾಳಿ ನಡೆಸಲಾಗಿದೆ. ಬಿಲ್ಡರ್ ಗಳ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ಆಗಿದೆ.