ರಷ್ಯಾದ ಮಾಸ್ಕೋದಲ್ಲಿ ಐಸಿಸ್ ಉಗ್ರರ ಅಟ್ಟಹಾಸಕ್ಕೆ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ ಉಗ್ರರು, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ ನೋಡ ನೋಡುತ್ತಿದ್ದಂತೆಯೇ ಹೆಣಗಳ ರಾಶಿಯೇ ಬಿದ್ದಿವೆ. ಭಯೋತ್ಪಾದಕ ಸಂಘಟನೆ ಐಸಿಸ್ ಈ ದಾಳಿಯ ಹೊಣೆ ಹೊತ್ತಿಕೊಂಡಿದೆ. ಇನ್ನು ಬಂದೂಕು ದಾಳಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡ ಧಗಧಗಿಸಿ ಹೊತ್ತಿ ಉರಿದಿದೆ. ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಂದೂಕುಗಳಿಂದ ದಾಳಿ ನಡೆಸಿದ್ದು, ಗ್ರೇನೆಡ್ ಗಳನ್ನ ಎಸೆದಿದ್ದಾರೆ