ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ಫೋಟ ಪ್ರಕರಣದ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ನನ್ನು ಎನ್ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ ಅಂತ ತಿಳಿದು ಬಂದಿದೆ. ಕಳೆದ ವಾರ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗಿತ್ತು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಅಂತ ಗೊತ್ತಾಗಿದೆ. ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು, ಎಎನ್ ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.