ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಮತ್ತಿಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ. ಬಂಧಿತ ಇಬ್ಬರು ಸಹ ಬಾಂಬರ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದರು ಎಂಬ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಎನ್ ಐಎ ಅಧಿಕಾರಿಗಳು ನಿರ್ಧರಿಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯೂ ಹಲವು ಕಡೆ ದಾಳಿ ನಡೆಸಿ ಶೋಧ ನಡೆಸಿದ್ದ ಎನ್ ಐಎ ಇಂದು ಕೂಡ ದಾಳಿ ಮುಂದುವರಿಸಿದೆ. ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಎನ್ಐಎ ಅಧಿಕಾರಿಗಳು ನಿನ್ನೆ ಬೆಂಗಳೂರಿನ ಐದು ಕಡೆ, ಶಿವಮೊಗ್ಗ ಜಿಲ್ಲೆಯ 15 ಸ್ಥಳಗಳಲ್ಲಿ ಹಾಗೂ ತಮಿಳುನಾಡಿನ ಚೆನ್ನೈಯ ಆರು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು.