ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗಿರುವ ಕೋಪದಲ್ಲಿರುವ ಸಂಸದೆ ಸುಮಲತಾಗೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಾಳ್ಮೆಯ ಪಾಠ ಮಾಡಿದ್ದಾರೆ. ಮೈತ್ರಿ ಧರ್ಮ ಪಾಲನೆಗಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಸಹಜವಾಗಿಯೇ ಸುಮಲತಾಗೆ ಬೇಸರ, ಅಸಮಾಧಾನ ತರಿಸಿದೆ ಅಂತ ಬಿಎಸ್ ವೈ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದೆ ಸುಮಲತಾ ಅವರು ಸ್ವಲ್ಪ ತಾಳ್ಮೆಯಿಂದ ಇದ್ದರೆ, ನಮ್ಮ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ಸಿಗಲಿದೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.