ಲೋಕಸಭೆ ಚುನಾವಣೆಯ ಮತದಾನಕ್ಕೂ ಮುನ್ನವೇ ಬಿಜೆಪಿ 400 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳುತ್ತಿದ್ದಾರೆ. ಬಿಜೆಪಿ ನಾಯಕರ 400 ಸ್ಥಾನ ಗೆಲ್ಲುವ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಕೇಸರಿ ಪಾಳಯದ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಎಂಬ ಸ್ಫೋಟಕ ಆರೋಪ ಹೊರಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ “ಸಂವಿಧಾನ ಉಳಿಸಿ” ಸಮಾವೇಶದಲ್ಲಿ ರಾಹುಲ್ ಗಾಂಧಿ ಮಾತನಾಡಿದರು, ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ. ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐಗಳನ್ನ ವಿಪಕ್ಷಗಳನ್ನ ಕಟ್ಟಿಹಾಕಲು ಬಳಸಿಕೊಳ್ಳಲಾಗುತ್ತಿದೆ.ಚುನಾವಣೆ ಘೋಷಣೆಗೂ ಮುನ್ನವೇ 400 ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಅಂತ ಪ್ರಚಾರ ಆರಂಭಿಸಿದ್ದಾರೆ. ಇದು ಹೇಗೆ ಸಾಧ್ಯ.? ಇದು ಬಿಜೆಪಿಯ ಮ್ಯಾಚ್ ಫಿಕ್ಸಿಂಗ್ ಅಲ್ಲದೆ ಮತ್ತೇನು ಅಂತ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಆದರೆ ಬಿಜೆಪಿಯ ಮ್ಯಾಚ್ ಫಿಕ್ಸಿಂಗ್ ವಿಫಲ ಆಗಲಿದೆ. ಆದರೆ ಬಿಜೆಪಿ 400 ಅಲ್ಲ 180 ಸೀಟ್ ದಾಟುವುದು ಅನುಮಾನ ಅಂತ ರಾಹುಲ್ ಗಾಂಧಿ ಟೀಕಿಸಿದ್ದಾರೆ.