ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿ ನಡೆದಿದೆ.
ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರ್ತಿದ್ದ ಖಾಸಗಿ ಬಸ್, ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.