ಬಾಗಲಕೋಟೆ ಲೋಕಸಭಾ ಟಿಕೆಟ್ ವಿಚಾರಕ್ಕೆಸಂಬಂಧಿಸಿದಂತೆ ಎದ್ದಿರುವ ಅಸಮಾಧಾನ ತಣಿಸುವ ನಿಟ್ಟಿನಲ್ಲಿ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ರನ್ನ ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಬಾಗಲಕೋಟೆ ಲೋಕಸಭಾ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ್ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ರು. ವೀಣಾ ಕಾಶಪ್ಪನವರ್ ಮತ್ತು ವಿಜಯಾನಂದ ಕಾಶಪ್ಪನವರ್ ಅವರು ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಸುದೀರ್ಘ ಚರ್ಚೆ ನಡೆಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.