ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲ ಬಳಸಿಕೊಳ್ಳುತ್ತಾರೆ ಆದರೆ RSS ನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ RSS ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ BJP-RSS ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.