ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗಳ ಗರ್ವಭಂಗವಾಗಬೇಕೆಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನನಗೆ ಯಾವ ಗರ್ವವೂ ಇಲ್ಲ. ದೇವೇಗೌಡರು ಹೇಳಿದ್ದಕ್ಕೆ ಹೇಳಿಕೆ ನೀಡಿದ್ದೇನೆ ಎಂದರು. ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದು ನಿಜ. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಅದನ್ನು ಹೇಳಿದರೆ ತಪ್ಪೇ ಎಂದರು. ತಮಗೆ ಮೋದಿಯವರೊಂದಿಗೆ ಅವಿನಾಭಾವ ಸಂಬಂಧವಿದೆ ಎಂದು ದೇವೇಗೌಡರು ಹೇಳಿದ್ದಾರೆ. ಹಾಗಾದರೆ ಮೇಕೆದಾಟು ಅಣೆಕಟ್ಟು ಮಾಡಿಸಲಿ.ಸತ್ಯ ಹೇಳಿದರೆ ಅವರ ದೃಷ್ಟಿಯಲ್ಲಿ ಗರ್ವ. ಸುಳ್ಳು ಹೇಳಿದವರು ಅವರು. ನಾನು ಸತ್ಯ ಹೇಳಿದರೆ ಗರ್ವ ಎನ್ನುತ್ತಾರೆ. ಇದಕ್ಕೆ ಏನು ಮಾಡುವುದು ಎಂದರು. ಹೋದ ಕಡೆಯೆಲ್ಲಾ ನಿಮ್ಮ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಪ್ರೀತಿ ತೋರುತ್ತಿದ್ದಾರೆ ಎಂದರು. ಮೈತ್ರಿ ಎಂದರೇನು ಎಂದು ಈ ಬಾರಿ ತೋರಿಸುತ್ತೇವೆ ಎಂಬ ಹೇಳಿಕೆಗೆ ಉತ್ತರಿಸಿದ ಸಿಎಂ, ಕಳೆದ ಬಾರಿಯೂ ತೋರಿಸಿದ್ದರಲ್ಲ ಎಂದು ವ್ಯಂಗ್ಯವಾಡಿದರು. ನಾವು ಜೊತೆಯಾಗುವುದಲ್ಲ ಜನರು ಜೊ ತೆಯಾಗಬೇಕು. ಜನರು ಯಾವ ಪಕ್ಷಕ್ಕೂ ಸೇರಿದವರಲ್ಲ.ಬಡವರ ಹಸಿವು ನೀಗಿಸಬೇಕು ಎಂದರು.