ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿ ಮತ್ತು ಸಾರ್ವಜನಿಕರ ಕಾರ್ಯದಕ್ಷತೆಗೆ ಪ್ರಶಂಸನೀಯ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.