ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಎಂಸಿ ರಘುಚಂದನ್ಗೆ ಟಿಕೆಟ್ ತಪ್ಪಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಕಾರಣ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಲೋಕಸಭೆ ಬಿಜೆಪಿ ಟಿಕೆಟ್ ಬಾಗಲಕೋಟೆ ಜಿಲ್ಲೆಯ ಯಡಿಯೂರಪ್ಪ ನಿಷ್ಠಾವಂತ ಗೋವಿಂದ ಕಾರಜೋಳ ಅವರಿಗೆ ನೀಡಲಾಗಿದೆ. ಚಿತ್ರದುರ್ಗದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಂದ್ರಪ್ಪ, ಚಿತ್ರದುರ್ಗ ಕ್ಷೇತ್ರಕ್ಕೆ ಪುತ್ರನೇ ಪ್ರಬಲ ಆಕಾಂಕ್ಷಿಯಾಗಿದ್ದರು, ಅವರು ಭಾರಿ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದರು.
ನನ್ನ ಮಗನಿಗೆ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಿತ್ತು, ಆದರೆ ಈ ಹಂತದಲ್ಲಿ ಯಡಿಯೂರಪ್ಪ ಮಧ್ಯಪ್ರವೇಶಿಸಿ ಕಾರಜೋಳ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಗೋವಿಂದ ಕಾರಜೋಳ ಜೊತೆ ಅದೇನು ಹೊಂದಾಣಿಕೆ ಇದೆಯೋ ಗೊತ್ತಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡದಿದ್ರೆ ನಾನು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ದಂಬಾಲು ಬಿದ್ದು, ಕಾರಜೋಳ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಹೀಗಾಗಿ ನಾನು ಯಡಿಯೂರಪ್ಪ ಕುಟುಂಬಕ್ಕೆ ತೋರಿದ ನಿಷ್ಠೆ ಸಾರ್ಥಕವೆನಿಸಿದೆ ಅಂತ ಲೇವಡಿ ಮಾಡಿದ್ದಾರೆ.