ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆ,ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳುವ ಮೂಲಕ ಈ ವಿಚಾರದ ಅರ್ಹತೆಗಳ ಬಗ್ಗೆ ಪ್ರತಿಕ್ರಿಯಿಸಲು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠ ನಿರಾಕರಿಸಿದೆ. ಕಾನೂನಿಗೆ ಅನುಸಾರವಾಗಿ ಪರಿಶೀಲಿಸುವುದು ಸರ್ಕಾರದ ಇತರ ವಿಭಾಗಳಿಗೆ ಸೇರಿದ್ದು ಎಂದು ಪೀಠ ಹೇಳಿದ್ದು, ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಮುಂದುವರಿಕೆಗೆ ಕಾನೂನು ತಡೆಯನ್ನು ತೋರಿಸಲು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಪರ ವಕೀಲರಿಗೆ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಹೇಳಿದೆ. ಪ್ರಾಯೋಗಿಕ ತೊಂದರೆಗಳಿರಬಹುದು ಆದರೆ ಕಾನೂನು ತಡೆ ಎಲ್ಲಿದೆ? ಎಂದು ನ್ಯಾಯಾಲಯ ಕೇಳಿ, ಅರ್ಜಿ ವಜಾಗೊಳಿಸಿದೆ