ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 8 ಮಂದಿಗೂ ಕ್ಲೀನ್ ಚೀಟ್ ಸಿಕ್ಕಿದೆ. ರಾಜಾಜಿನಗರದ ಜೆಟ್ ಲಾಗ್ ಪಬ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪಬ್ನಲ್ಲಿ ತಡರಾತ್ರಿವರೆಗೂ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಅಂತ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
ಹೋಟೆಲ್, ಬಾರ್ & ರೆಸ್ಟೋರೆಂಟ್ ಗೆ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಮುಚ್ಚಬೇಕು. ಒಂದು ಗಂಟೆ ಆಗುತ್ತಿದ್ದಂತೆಯೇ ಪಾರ್ಟಿ ಪೂರ್ಣಗೊಳಿಸಬೇಕಿತ್ತು. ಆದರೆ. ಅವಧಿ ಮೀರಿ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಟ್ಲಾಗ್ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೋಟಿಸ್ ಜಾರಿಯಾಗಿತ್ತು.