ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುವ ವೇಳೆ ಎಡಗೈನ ಹೆಬ್ಬೆರಳಿನ ಗಾಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ಗೆ ಪಂದ್ಯದಲ್ಲಿ ಆಡುತ್ತಾರಾ, ಇಲ್ವಾ ಎನ್ನುವ ಅನುಮಾನ ಕಾಡುತ್ತಿದೆ. ಕಾರಣ ಐರ್ಲೆಂಡ್ ವಿರುದ್ಧ ಮೊದಲ ಮ್ಯಾಚ್ ಆಡುವಾಗ ಭುಜದ ನೋವಿನಿಂದ ಹಿಟ್ಮ್ಯಾನ್ ಹೊರ ನಡೆದಿದ್ದರು. ಆದರೆ ಇಂದು ನೆಟ್ಸ್ನಲ್ಲಿ ಪ್ರಾಕ್ಟೀಸ್ ಮಾಡುವಾಗ ಮತ್ತೆ ಹೆಬ್ಬೆರಳಿನ ಗಾಯಕ್ಕೆ ಒಳಗಾಗಿರುವುದು ಮತ್ತೆ ತಂಡಕ್ಕೆ ದೊಡ್ಡ ಆತಂಕ ಮೂಡಿಸಿದೆ ಎನ್ನಲಾಗಿದೆ.
ಇಂಡಿಯಾ-ಪಾಕ್ ನಡುವಿನ ಪಂದ್ಯಕ್ಕೆ ರೋಹಿತ್ ಶರ್ಮಾ ಮೈದಾನಕ್ಕೆ ಇಳಿಯದಿದ್ದರೇ ಉಪನಾಯಕ ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ ಆಗಿ ಮುಂದುವರೆಯೋ ಸಾಧ್ಯತೆ ಇದೆ. ನೆಟ್ಸ್ನಲ್ಲಿ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದ ರೋಹಿತ್ ಹೆಬ್ಬೆರಳಿಗೆ ಗಾಯವಾಗಿದ್ದು, ತಕ್ಷಣ ಸ್ಥಳಕ್ಕೆ ಬಂದ ವೈದ್ಯಕೀಯ ತಂಡ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚಿಕಿತ್ಸೆ ನೀಡಿದ್ದಾರೆ. ಇದರಿಂದ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಗಾಯದ ನೋವು ಸಂಪೂರ್ಣವಾಗಿ ಕ್ಷೀಣಿಸಿದರೆ ಮಾತ್ರ ಅವರು ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಪಂದ್ಯಕ್ಕೆ ಅಲಭ್ಯರಾದರೆ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.