ಈಗಾಗಲೇ ಇತ್ಯರ್ಥವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ರಾತ್ರಿ ನನಗೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಬಿಜೆಪಿಯವರಿಗೆ ಗೊತ್ತು. ಹೀಗಾಗಿ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈಗಾಗಲೇ ಇತ್ಯರ್ಥವಾದ ವಿಚಾರಕ್ಕೆ ನೋಟಿಸ್ ಬಂದಿದೆ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಇನ್ನು ಬಾಕಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಿದೆ. ನಾನು ಸೇರಿದಂತೆ ವಿಪಕ್ಷಗಳ ಅನೇಕ ನಾಯಕರಿಗೆ ಸಿಬಿಐ, ಐಟಿ, ಇಡಿ ದಾಳಿ ಮೂಲಕ ಕಿರುಕುಳ ನೀಡುತ್ತಿದೆ. ಆದರೆ ದಾಳಿ ಸಂಬಂಧ ಇದುವರೆಗೂ ಸೂಕ್ತ ದಾಖಲೆ ಸಲ್ಲಿಸಿಲ್ಲ. ಕೇಂದ್ರದ ತನಿಖಾ ಸಂಸ್ಥೆಗಳ ದಾಳಿಯನ್ನು ನಾವು ಎದುರಿಸುತ್ತೇವೆ ಎಂದು ಹೇಳಿದರು.