ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಸಂಬಂಧ, ಸಂಸದೆ ಸುಮಲತಾರ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ ಬೆಂಬಲಿಗರು, ಮಂಡ್ಯದಿಂದ ಮತ್ತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುಂತೆ ಒತ್ತಾಯ ಮಾಡಿದರು. ನಂತರ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಮಂಡ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಪಕ್ಷದ ವರಿಷ್ಠರು ಹೇಳುತ್ತಿದ್ದಾರೆ ಮತ್ತು ತನಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆ. ನಿನ್ನೆ ತಮ್ಮನ್ನು ಭೇಟಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹ ತನಗೆ ಅದೇ ಮಾತನ್ನು ಹೇಳಿದ್ದಾರೆ. ಆದರೆ ಬೆಂಬಲಿಗರು ಮಂಡ್ಯದಿಂದ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ ಎಂದು ಸುಮಲತಾ ಹೇಳಿದರು. ಇನ್ನೂ ಯಾವುದನ್ನೂ ನಿರ್ಧರಿಸಿಲ್ಲ, ಏಪ್ರಿಲ್ 3 ರಂದು ಕಾರ್ಯಕರ್ತರ ಜೊತೆ ಮತ್ತೊಂದು ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸುಮಲತಾ ಹೇಳಿದರು.