ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವ ಹಾಗೆ, ಕೋಲಾರ ಲೋಕಸಭಾ ಟಿಕೆಟ್ ಬೆಂಗಳೂರಿನ ಮಾಜಿ ಮೇಯರ್ ವಿಜಯ್ ಅವರ ಪುತ್ರ ಕೆ.ವಿ. ಗೌತಮ್ ಅವರಿಗೆ ನೀಡಲಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಹೆಚ್.ಮುನಿಯಪ್ಪ,ಟಿಕೆಟ್ ಘೋಷಣೆ ಬಳಿಕ ಮುನಿಸು ಮರೆತು ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ನಮ್ಮ ಹೆಸರು ತೀರ್ಮಾನಿಸಿದ್ದರು. ನಮ್ಮಲ್ಲಿ ಒಮ್ಮತ ಅಭಿಪ್ರಾಯ ಬಾರದಿದ್ದಕ್ಕೆ ಕೆ.ವಿ.ಗೌತಮ್ಗೆ ಕೊಟ್ಟಿದ್ದಾರೆ. ನಮಗೆ ಟಿಕೆಟ್ ತಪ್ಪಿಸಿದ್ದವರ ಬಗ್ಗೆ ಮಾತಾಡುವುದು ಬೇಡ. ನಾವೆಲ್ಲರೂ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡಬೇಕು. ಆದ್ದರಿಂದ ಅವರು ಸಹ ಕೆಲಸ ಮಾಡಲಿ, ನಾನು ಕೆಲಸ ಮಾಡುತ್ತೇನೆ. ಅಂತಿಮವಾಗಿ ಕಾಂಗ್ರೆಸ್ ಗೆಲ್ಲಬೇಕಲ್ವೇ? ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.