ಇ.ಡಿ ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ಎಎಪಿ ಮತ್ತೆ ಆರೋಪಿಸಿದೆ. ಅಲ್ಲದೇ ಈ ಬಾರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ ಹೊರಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನಿನಿಂದ ಆಮ್ ಆದ್ಮಿ ಪಕ್ಷದ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಕದಿಯಲು ಇಡಿ ಪ್ರಯತ್ನಿಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ. ಇ.ಡಿ ಕೇಜ್ರಿವಾಲ್ ಅವರ ಮೊಬೈಲ್ ಫೋನ್ ಅನ್ನು ಪರಿಶೀಲಿಸಲು ಮುಂದಾಗಿದೆ. ಆದರೆ, 2021-22ರಲ್ಲಿ ದೆಹಲಿಯಲ್ಲಿ ಅಬಕಾರಿ ನೀತಿಯನ್ನು ರೂಪಿಸಿ, ಜಾರಿಗೆ ತಂದಾಗ ಅವರ ಬಳಿ ಈ ಫೋನ್ ಇರಲಿಲ್ಲ. ಇದು ಕೆಲವೇ ತಿಂಗಳ ಹಿಂದಿನದ್ದು. ಈ ಮೂಲಕ ತನಿಖಾ ಸಂಸ್ಥೆಯು ಬಿಜೆಪಿಯ ‘ರಾಜಕೀಯ ಅಸ್ತ್ರ’ವಾಗಿ ಕೆಲಸ ಮಾಡುತ್ತಿದೆ ಎಂಬುದು ಸಾಬೀತಾಗಿದೆ ಎಂದು ದೂರಿದರು. ಚುನಾವಣಾ ಮಾಹಿತಿಗಳು ಇಡಿಗೆ ಬೇಕಿಲ್ಲ, ಬದಲಾಗಿ ಬಿಜೆಪಿಗೆ ಬೇಕಿದೆ. ಹೀಗಾಗಿ ಇಡಿ ಮೂಲಕ ಮಾಹಿತಿ ಪಡೆಯಲು ಯತ್ನಿಸುತ್ತಿದ್ದಾರೆ ಸಚಿವೆ ಅತಿಶಿ ಆರೋಪಿಸಿದ್ದಾರೆ.