ಕೋಲಾರ ಲೋಕಸಭೆ ಕ್ಷೇತ್ರದ ಟಿಕೆಟ್ ವಿಷಯಕ್ಕೆ ಸಂಬಂಧಿಸಿದಂತೆ ಭುಗಿಲೆದಿರುವ ಅಸಮಾಧಾನ ತಣಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಕೋಲಾರ ಲೋಕಸಭಾ ಟಿಕೆಟ್ ಅನ್ನ ಸಚಿವ ಕೆ.ಹೆಚ್. ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ನೀಡದಂತೆ, ನಿನ್ನೆಯಷ್ಟೇ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದರು. ಶಾಸಕರ ರಾಜೀನಾಮೆಯನ್ನ ತಡೆದಿದ್ದ ಸಿಎಂ ಸಿದ್ದರಾಮಯ್ಯ, ಸಭೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ರು. ಈ ಹಿನ್ನೆಲೆಯಲ್ಲಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೋಲಾರ ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.