ಲೋಕಸಭಾ ಚುನಾವಣೆಗೆಟಿಕೆಟ್ ಹಂಚಿಕೆ ವಿಚಾರದಲ್ಲಿ ಕೋಲಾರ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಕುಟುಂಬಕ್ಕೆ ಮಣೆ ಹಾಕದಂತೆ ಅಭಿಯಾನ ನಡೆಸಲಾಗುತ್ತಿದೆ. ಗೋ ಬ್ಯಾಕ್ ಕೆ.ಹೆಚ್ ಮುನಿಯಪ್ಪ ಎಂದು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ. ಕುಟುಂಬ ರಾಜಕೀಯಕ್ಕೆ ಬ್ರೇಕ್ ಹಾಕಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ‘ಚಿನ್ನಪೆದ್ದಪ್ಪ ನುವ್ವು ವೊದ್ದಪ್ಪಾ’ ಎಂದು ಡೈಲಾಗ್ ಹೊಡೆದು ಕೈ ಕಾರ್ಯಕರ್ತರು ವ್ಯಂಗ್ಯ ಮಾಡ್ತಿದ್ದಾರೆ.
ಮೀಸಲಾತಿ ಕ್ಷೇತ್ರ ಬಿಟ್ಟು ಸಾಮಾನ್ಯ ಕ್ಷೇತ್ರಕ್ಕೆ ಹೋಗಿ, ಬಲಗೈ ಸಮಾಜಕ್ಕೆ ಟಿಕೆಟ್ ನೀಡಿ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ ಆಪ್ತರಾಗಿರುವ ಸತೀಶ್ ರಾಜಣ್ಣ ಒತ್ತಾಯಿಸಿದ್ದಾರೆ. ಸಚಿವ ಕೆಎಚ್ ಮುನಿಯಪ್ಪ ವಿರುದ್ಧ ಕುಟುಂಬ ರಾಜಕಾರಣ ಆರೋಪ ಮಾಡಿದ್ದು, ಮೀಸಲಾತಿ ಒಂದೇ ಕುಟುಂಬಕ್ಕೆ ಸೀಮಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.