ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್ ಇಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಇತರರು ಈ ವೇಳೆ ಉಪಸ್ಥಿತರಿದ್ದರು.
ಸಲ್ಲಿಕೆಗೂ ಮುನ್ನ ರಾಮನಗರದ ಪೊಲೀಸ್ ಭವನ ಸರ್ಕಲ್ ನಿಂದ ಬೃಹತ್ ಮೆರವಣಿಗೆ ನಡೆಸಿದರು. ಈ ವೇಳೆ ಭಾರೀ ಜನಸ್ತೋಮವೇ ನೆರೆದಿತ್ತು. ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಮನೆ ದೇವರು ಕಬ್ಬಾಳಮ್ಮ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕನಕಪುರದ ಕೋಡಿಹಳ್ಳಿ ನಿವಾಸಕ್ಕೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದುಕೊಂಡರು. ಬಳಿಕ ಮನೆದೇವರುಗಳಾದ ಕೆಂಕೇರಮ್ಮ, ಕಬ್ಬಾಳಮ್ಮ, ಮರಳೆಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.