ಕನ್ನಡ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಶಿವಣ್ಣನ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದು, ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವರಾಜ್ ಕುಮಾರ್ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ. ಜನರಲ್ ಚೆಕಪ್ಗಾಗಿ ಬಂದಿದ್ದಾರೆ ಎಂದು ವೈದ್ಯರು ಈಗ ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದ ಜೊತೆಗೆ ಶಿವರಾಜ್ ಕುಮಾರ್ ಅವರ ಅಭಿನಯದ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರನ್ನ ವೈದ್ಯರು ರೆಗ್ಯುಲರ್ ಚೆಕ್ ಅಪ್ ಮಾಡಿದ್ದು, ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಂಜೆಯ ವೇಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.