ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದಂತೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಮೈಸೂರಿನ ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರ ವಿರುದ್ಧ ಸದಾ ಕೆಂಡಕಾರುತ್ತಿದ್ದ ಶ್ರೀನಿವಾಸ್ ಪ್ರಸಾದ್ ಭೇಟಿ ಹಿಂದೆ ರಾಜಕೀಯ ಕಾರಣವೂ ಇದೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ ಮತ್ತು ಚಾಮರಾಜನಗರದಲ್ಲಿ ಪುತ್ರ ಸುನೀಲ್ ಬೋಸ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಅವರಿಗೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಾಥ್ ನೀಡಿದರು. ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ರಣತಂತ್ರ ರೂಪಿಸಿರುವ ಭಾಗವಾಗಿ ಈ ಭೇಟಿ ನಡೆದಿದೆ ಎನ್ನಲಾಗಿದೆ.