ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ, ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಘರ್ ವಾಪ್ಸಿ ಆಗಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬರಮಾಡಿಕೊಂಡರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮದಲ್ಲಿ ಪತ್ನಿ ಜೊತೆ ಕಮಲ ಪಾಳಯ ಸೇರಿದ ಜನಾರ್ದನ ರೆಡ್ಡಿ, ತಮ್ಮ ಪಕ್ಷವನ್ನೂ ಬಿಜೆಪಿ ಜೊತೆ ವಿಲೀನಗೊಳಿಸಿದ್ದಾರೆ. ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ, “ಬಹಳ ಸಂತೋಷದ ಸಂಗತಿ. ಬಿಜೆಪಿಗೆ ಸೇರ್ಪಡೆ ಆಗಿರುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ, ಬಿಜೆಪಿ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಮರು ಸೇರ್ಪಡೆ ಆಗಿದ್ದಾರೆ ಅಂತ ತಿಳಿಸಿದ್ರು. ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣ ನಿರ್ಮಾಣವಾಗಿದೆ. ಲೋಕಸಭೆ ಚುನಾವಣೆ ದೇಶದ ಭವಿಷ್ಯ ರೂಪಿಸುವ ಚುನಾವಣೆ. ಕರ್ನಾಟಕ ರಾಜ್ಯದಲ್ಲಿ ಐತಿಹಾಸಿಕ ಗೆಲುವು ಬಿಜೆಪಿಗೆ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಯಾವುದೇ ಷರತ್ತು, ಫಲಾಪೇಕ್ಷೆ ಇಲ್ಲದೆ ಬಿಜೆಪಿಗೆ ಸೇರ್ಪಡೆ ಆಗಿದ್ದೀನಿ. ಮರಳಿ ತಾಯಿಯ ಮಡಿಲಿಗೆ ಬಂದಂತಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದ್ರು