ಲೋಕಸಭಾ ಚುನಾವಣೆಗೆ ಸಂಬoಧಿಸಿದoತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ರಂಗದ 4 ಪ್ರಮುಖ ವ್ಯಕ್ತಿಗಳನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್, ಬಿಗ್ ಬಾಸ್ ಸ್ಪರ್ಧಿ ನೀತು ವನಜಾಕ್ಷಿ ಸೇರಿದಂತೆ ನಾಲ್ವರನ್ನು ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರಾಯಭಾರಿಗಳನ್ನ ನೇಮಕ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ನಗರದ ಜನತೆಗೆ ಹುಮ್ಮಸ್ಸು ತುಂಬಿಸುವ ಸಲುವಾಗಿ ಹಾಗೂ ಚುನಾವಣಾ ಹಬ್ಬಕ್ಕಾಗಿ ‘ನಮ್ಮ ಬೆಂಗಳೂರು ಐಕಾನ್ಸ್’ ಹೆಸರಿನಲ್ಲಿ ನಟ, ರಮೇಶ್ ಅರವಿಂದ್, ನಟಿ ಹಾಗೂ ರೂಪದರ್ಶಿ ನೀತು ವನಜಾಕ್ಷಿ, ಬ್ಯಾಡ್ಮಿಂಟನ್ ಆಟಗಾರ ಅನುಪ್ ಶ್ರೀಧರ್ ಹಾಗೂ ಟೇಬಲ್ ಟೆನ್ನಿಸ್ ಆಟಗಾರ್ತಿ ಅರ್ಚನಾ ಜಿ ಕಾಮತ್ ರಾಯಭಾರಿ ಆಗಿ ಆಯ್ಕೆಯಾಗಿದ್ದಾರೆ.
ನಗರದ ಟೌನ್ ಹಾಲ್ ನಲ್ಲಿ ‘ನಮ್ಮ ಬೆಂಗಳೂರು ಐಕಾನ್ಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ನಗರದ ಜನರನ್ನು ಮತ ಚಲಾಯಿಸಲು ಪ್ರೇರೇಪಿಸುವ ಸಲುವಾಗಿ ಮತ್ತು ನಾಗರಿಕರಲ್ಲಿ ಜಾಗೃತಿ ಮೂಡಿಸಲು ಈ ಐದು ಪ್ರಮುಖ ವ್ಯಕ್ತಿಗಳು ನಮ್ಮೊಂದಿಗೆ ಕೈ ಜೋಡಿಸಲಿದ್ದಾರೆ.” ಹಾಗು ಮತದಾನ ಕೇಂದ್ರದ ಮಾಹಿತಿಯನ್ನು ಮತದಾರರಿಗೆ 10 ದಿನಗಳ ಮುಂಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದರು. ವಿವರಗಳನ್ನು ಪಡೆಯಲು ನಾಗರಿಕರು ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಮತದಾನ ಅರ್ಜಿಯಲ್ಲಿ ನಮೂದಿಸಬಹುದು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, “ಮುಂಬರುವ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತ ಚಲಾಯಿಸಬೇಕು. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಆದರು, ಮತದಾನದ ಶೇಕಡಾ ಪ್ರಮಾಣದಲ್ಲಿ ಇನ್ನು ಬಹಳ ಹಿಂದುಳಿದಿದೆ. ನಾಗರಿಕರು ಹೆಚ್ಚು ಜಾಗೃತರಾಗಿರಬೇಕು…ಹೆಚ್ಚಿನ ಸಂಖೆಯಲ್ಲಿ ಮತದಾನ ಮಾಡಬೇಕು” ಎಂದು ತಿಳಿಸಿದ್ದರು.