ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋವನ್ನ ಎಐಎ ಬಿಡುಗಡೆ ಮಾಡಿದೆ. ಇಬ್ಬರು ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದೆ. ಕೆಲವು ದಿನಗಳ ಹಿಂದಷ್ಟೇ ಎನ್ಐಎ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಆರೋಪಿ ಮುಜಾಮಿಲ್ ಶರೀಫ್ ಎಂಬಾತನನ್ನ ಬಂಧಿಸಲಾಗಿತ್ತು. ಇಂದು ಮುಜಾಮಿಲ್ ಶರೀಫ್ನನ್ನು 7 ದಿನಗಳ ಕಾಲ ಎನ್ಐಎ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.