ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅಸಮಾಧಾನ ವಿಚಾರವಾಗಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಲೋಕಸಭಾ ಚುನಾವಣೆ ಸೋಲು-ಗೆಲುವಿನ ಚರ್ಚೆ ಆಗಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ಸೋಲು-ಗೆಲುವಿನ ಚರ್ಚೆ ಆಗಿದೆ. ಐದು ನಿಮಿಷಗಳ ಕಾಲ ರಾಹುಲ್ ಗಾಂಧಿ ನಮ್ಮ ಜೊತೆ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಚುನಾವಣೆಯ ಸೋಲು ಗೆಲುವಿನ ಬಗ್ಗೆ ಚರ್ಚೆ ಮಾಡಿ ಎಂದಿದ್ದಾರೆ. ಮುಂದೆ ಯಾವ ಪಕ್ಷ ಸಂಘಟನೆ ಮಾಡಬೇಕು ಎನ್ನುವುದರ ಬಗ್ಗೆಯೂ ಚರ್ಚೆ ಆಗಿದೆ. ಸಚಿವರ ಮೌಲ್ಯಮಾಪನದ ಬಗ್ಗೆ ಮಾತನಾಡಿಲ್ಲ ಎಂದರು.
ಲೋಕಸಭಾ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ನಿನ್ನೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಲೋಕಸಭಾ ಕ್ಷೇತ್ರಗಳಿಗೆ ಸಚಿವರು ಕೇಳಿದವರಿಗೆ ಟಿಕೆಟ್ ನೀಡಲಾಗಿತ್ತು. ಆದರೂ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ ಈ ಬಾರಿಯ ಎಲೆಕ್ಷನ್ನಲ್ಲಿ ಎರಡಂಕ್ಕಿ ದಾಟಿಲ್ಲ ಈ ಕಾರಣಕ್ಕೆ ರಾಹುಲ್ ಗರಂ ಆಗಿದ್ದರು.