ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ನೇತೃತ್ವದಲ್ಲಿ ಸಚಿವರಾದ ನಾಗೇಂದ್ರ, ವಸತಿ ಸಚಿವ ಜಮೀರ್ ಅಹಮದ್, ಸಂಡೂರು ಶಾಸಕ ತುಕಾರಾಂ ಸೇರಿ ಹಲವು ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಬಳ್ಳಾರಿ ಲೋಕಸಭಾ ಚುನಾವಣೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು. ನಾಲ್ಕು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆ ಆಗಿರುವ ಮಾಜಿ ಸಚಿವ ಸಂಡೂರು ಶಾಸಕ ಈ.ತುಕಾರಾಂ ಅವರಿಗೆ ಮುಂದೆ ಉತ್ತಮ ರಾಜಕೀಯ ಭವಿಷ್ಯ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು.