- ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
- ಲೋಕಸಭೆ ಚುನಾವಣೆಯ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
- ಸಿಎಂ ಯೋಗಿ ಅದಿತ್ಯನಾಥ್, ಕೇಂದ್ರ ಸಚಿವರು, ಬಿಜೆಪಿ ನಾಯಕರು ಮೋದಿಗೆ ಸಾಥ್ ನೀಡಿದರು.
ಲೋಕಸಭೆ ಚುನಾವಣೆ ರಂಗೇರಿದ್ದು, ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ವಾರಾಣಸಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿಯವರು ನಾಮಪತ್ರ ಸಲ್ಲಿಸಿದರು. ಮೋದಿ ಸತತ 3 ನೇ ಅವಧಿಗೆ ವಾರಣಾಸಿಯಿಂದಲೇ ಸ್ಪರ್ಧಿಸುತ್ತಿದ್ದು, ಲೋಕಸಭೆ ಚುನಾವಣೆಯ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಉತ್ತರಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್, ಕೇಂದ್ರ ಸಚಿವರು, ಬಿಜೆಪಿ ನಾಯಕರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 25ಕ್ಕೂ ಅಧಿಕ ನಾಯಕರು ಪ್ರಧಾನಿ ನರೇಂದ್ರ ಮೋದಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಸೋಮವಾರ ರೋಡ್ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ.