ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಎಕ್ಸ್ನಲ್ಲೂ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ ಕೃಷಿ ಕ್ಷೇತ್ರದ ಪ್ರಗತಿಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಹೆಚ್.ಡಿ ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ರಾಷ್ಟ್ರಕ್ಕೆ ನೀಡಿದ ಕೊಡುಗೆಗಾಗಿ ರಾಜಕೀಯ ವಲಯದಲ್ಲಿ ಅವರು ಸಾಕಷ್ಟು ಗೌರವಕ್ಕೆ ಪಾತ್ರರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಒಲವು ಗಮನಾರ್ಹವಾಗಿದೆ. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.