ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ ಒಂದು ವರ್ಷ ಪೂರೈಸಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಲು ನಿರ್ಧಸಿದ್ದರೆ, ಇತ್ತ ಸರ್ಕಾರದ 1 ವರ್ಷದ ಕಾರ್ಯವೈಖರಿ ಹಾಗೂ ವೈಫಲ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಕರೆ ನೀಡಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಗೆದ್ದು ಸರ್ಕಾರ ರಚಸಿದ ಬಳಿಕ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ, ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ ಮನೆ ಮಾಡಿದೆ. ಮತ್ತೊಂದೆಡೆ ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿವೆ. ಒಂದು ವರ್ಷದಲ್ಲಿ ಸರ್ಕಾರ ಲೋಪ–ದೋಷಗಳು, ವೈಫಲ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತೆ ಪ್ರತಿಭಟನೆ ಮಾಡಲು ರಾಜ್ಯ ಬಿಜೆಪಿ, ಎಲ್ಲಾ ಬಿಜೆಪಿ ಘಟಕಗಳಿಗೆ ಸೂಚನೆ ನೀಡಿದೆ.