ಲೋಕಸಭಾ ಚುನಾವಣೆ ಐದನೇ ಹಂತದ ಮತದಾನ ಸೋಮವಾರ ಆರಂಭವಾಗಿದ್ದು, ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳ ಮತದಾರರು ತಮ್ಮ ಹ್ಕು ಚಲಾಯಿಸುತ್ತಿದ್ದಾರೆ. ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಮೇ 14 ರಂದು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ನೀವು ಸಂಸದರಾದರೇ ನಿಮ್ಮ ಮನಸ್ಸಿನಲ್ಲಿ ಯಾವ ಯೋಜನೆಗಳಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಅಭ್ಯರ್ಥಿ ಕಂಗನ ರಣಾವತ್ ಅವರು, ನಾನು ಮಾಡುತ್ತಿರುವ ಕೆಲಸ ಸಾಕಷ್ಟು ಯೋಜನೆಗಳಿವೆ. ಲೋಕಸಭೆ ಚುನಾವಣೆ ಮುಗಿದ ನಂತರ ನನ್ನ ಸಿನಿಮಾ ಶೂಟಿಂಗ್ ಮತ್ತೆ ಶುರು ಮಾಡಬೇಕು. ನನ್ನ ಬಳಿ ಇನ್ನು 3 ಸಿನಿಮಾಗಳಿವೆ ಅದು ಪೈಪ್ಲೈನ್ನಲ್ಲಿದೆ ಎಂದು ಹೇಳಿದ್ದಾರೆ.