- ಕೌಟುಂಬಿಕ ಕಲಹದಿಂದ ಪತಿಯಿಂದ ಪತ್ನಿಯ ಹತ್ಯೆ
- ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಘಟನೆ
- ಪತ್ನಿ ಮೇಲೆ ಹಲ್ಲೆ ನಡೆಸಿ ಪತಿ ನಂದೀಶ್ ಪರಾರಿ
ಕೌಟುಂಬಿಕ ಕಲಹದಿಂದ ಪತಿಯೇ ತನ್ನ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಲೆಯಾಗಿರೋ ವಿದ್ಯಾ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಕಾಣಿಸಿಕೊಂಡಿದ್ರು. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಟಿ ವಿದ್ಯಾ ಮಕ್ಕಳ ಜೊತೆ ಮೈಸೂರಿನ ಶ್ರೀರಾಮಪುರದಲ್ಲಿ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ತೆರಳಿದ್ದಾಗ ಗಲಾಟೆ ನಡೆದಿದೆ. ಇದು ವಿಕೋಪಕ್ಕೆ ಹೋಗಿ ವಿದ್ಯಾ ಕೊಲೆಯಲ್ಲಿ ಕೊನೆಯಾಗಿದೆ. ಈ ಕೊಲೆಗೆ ಅಸಲಿ ಕಾರಣ ಏನು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಪತ್ನಿ ಮೇಲೆ ಹಲ್ಲೆ ನಡೆಸಿ ಪತಿ ನಂದೀಶ್ ಪರಾರಿಯಾಗಿದ್ದಾನೆ.
ಶಿವರಾಜ್ಕುಮಾರ್ ಅಭಿನಯದ ‘ಭಜರಂಗಿ’ ಸಿನಿಮಾದಲ್ಲಿ ವಿದ್ಯಾ ನಟಿಸಿದ್ದರು. ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಸಿನಿಮಾದಲ್ಲಿ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು.