- ರಾಜ್ಯದಲ್ಲಿ ಮೇ 31ಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ
- ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆ ಮುಂಗಾರು ಮಳೆ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವುದರಿಂದ ರೈತರಲ್ಲಿ ಸಂಸತ ಮೂಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31 ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2 ರಂದು ಪ್ರವೇಶಿಸಬಹುದು. ಕರಾವಳಿಯಿಂದ ಪ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಹೇಳಿದ್ದಾರೆ.