ಅಯೋಧ್ಯೆ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಶನಿವಾರ ನಡೆದ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದಲ್ಲಿ ಸಾರ್ವಜನಿಕರು ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿತ್ತು ಆದರೆ ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಕೊಂಡೋಯ್ಯುವುದನ್ನು ನಿಷೇಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಟ್ರಸ್ಟ್ ಅನಿಲ್ ಮಿಶ್ರಾ , ಅವರು ಎಲ್ಲಾ ಭಕ್ತರು ಈ ನಿರ್ಧಾರವನ್ನು ಗೌರವಿಸಬೇಕು. ಮೊಬೈಲ್ ಪೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಇಡಲು ಲಾಕರ್ ರೂಮ್ ಸೌಲಭ್ಯವಿದೆ. ಅದನ್ನು ಎಲ್ಲಾ ಭಕ್ತರು ಬಳಸಿಕೊಂಡು ದೇವಾಲಯದಲ್ಲಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು. ಈ ನಿಯಮ ಶನಿವಾರ ಮೇ 26 ರಿಂದಲೇ ಅನ್ವಯವಾಗಲಿದೆ ಎಂದು ಟ್ರಸ್ಟ್ ಹೇಳಿದೆ.