ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಬ್ಯಾಕ್ ಟು ಬಾಕ್ ಸಿನಿಮಾಗಳಲ್ಲಿ ಬ್ಯುಸಿ. ರೀಸೆಂಟ್ ಆಗಿ ಬ್ಲಿಂಕ್ ಸಿನಿಮಾ 50 ದಿನಗಳನ್ನು ಪೂರೈಸಿದ ಖುಷಿಯಲ್ಲಿರುವ ದೀಕ್ಷಿತ್ ಸದ್ಯ ಮತ್ತೊಂದು ಚಿತ್ರದ ಮೂಲಕ ಸುದ್ದಿಯಲ್ಲಿದ್ದಾರೆ. ಅದೇ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ.
ಸದ್ಯ ಈ ಚಿತ್ರದ ಅನಿಮೇಷನ್ ಟೀಸರ್ ರಿಲೀಸ್ ಆಗಿದೆ. ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಅಭಿಷೇಕ್ ಎಂ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
ಈ ಅನಿಮೇಷನ್ ಟೀಸರ್ ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದು. ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ. ಅನಿಮೇಷನ್ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಚಿತ್ರತಂಡ ಖುಷಿಪಟ್ಟಿದೆ.
ಅಂದಹಾಗೆ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ. ಇನ್ನು ದೀಕ್ಷಿತ್ ಶೆಟ್ಟಿ ಗೆ ನಾಯಕಿಯಾಗಿ “ಪ್ರೇಮಂ ಪೂಜ್ಯಂ” ಹಾಗೂ “ಕೌಸಲ್ಯ ಸುಪ್ರಜಾ ರಾಮ” ಖ್ಯಾತಿಯ ಬೃಂದಾ ಆಚಾರ್ಯ ಮಿಂಚಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದಲ್ಲಿದ್ದಾರೆ.
ವಿಶೇಷ ಅಂದ್ರೆ ನಟ ರಕ್ಷಿತ್ ಶೆಟ್ಟಿ ಸಾರಥ್ಯದ “ಪಿನಾಕ” ವಿ ಎಫ್ ಎಕ್ಸ್ ಸ್ಟುಡಿಯೋದಲ್ಲೇ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟೀಸರ್ ನ ಅನಿಮೇಷನ್ ವರ್ಕ್ ನಡೆದಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಜ್ಯೂಡಾ ಸ್ಯಾಂಡಿ ಮ್ಯೂಸಿಕ್, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸದ್ಯದಲ್ಲೇ ಮತ್ತಷ್ಟು ಅಪ್ಡೇಟ್ ಬರಲಿದೆ.