- ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ
- ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಬಿಜೆಪಿ ಗಡುವು
- ಜೂನ್ 6 ರವರೆಗೆ ಗಡುವು ನೀಡಿ ಎಚ್ಚರಿಕೆ ನೀಡಿದ ಬಿಜೆಪಿ
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸಲು ರಾಜ್ಯ ಸರ್ಕಾರಕ್ಕೆ ಬಿಜೆಪಿ ಜೂನ್ 6 ರವರೆಗೆ ಗಡುವು ನೀಡಿ ಎಚ್ಚರಿಕೆ ನೀಡಿದೆ. ಅಧಿಕಾರಿ ಚಂದ್ರಶೇಖರನ್ ಪಿ, ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಕಾರಣರಾದವರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಈ ಪ್ರಕರಣವನ್ನು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ಸಚಿವರು ರಾಜೀನಾಮೆ ನೀಡದೇ ಇದ್ದರೆ ನಾವು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.